ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ನೀಡಿದ್ದ ಕೊನೆಯ ದಿನಾಂಕವನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ.
ನಿಗದಿತ ಸಮಯಕ್ಕೆ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ನೀಡದಿದ್ದ ಕಾರಣ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಕ್ಯಾನ್ ಪ್ರತಿ ಡೌನ್ ಲೋಡ್ ಗೆ ನೀಡಿದ್ದ ಗಡುವನ್ನು ಜುಲೈ 15 ರವರೆಗೆ ವಿಸ್ತರಿಸಿದೆ. ಜುಲೈ 6 ರಿಂದ ಸ್ಕ್ಯಾನ್ ಪ್ರತಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಡೌನ್ಲೋಡ್ ಆಗುತ್ತಿರಲಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.
ಇದೀಗ ಸ್ಕ್ಯಾನ್ ಪ್ರತಿ ಡೌನ್ಲೋಡ್ ಗೆ ನೀಡಿದ್ದ ದಿನಾಂಕವನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ ಜುಲೈ 13ರವರೆಗೆ ಅರ್ಜಿ ಸಲ್ಲಿಸಲು ನೀಡಿದ್ದ ಗಡುವನ್ನು ಜುಲೈ 18ರವರೆಗೆ ವಿಸ್ತರಿಸಲಾಗಿದೆ.