ಬೆಂಗಳೂರು: ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 17ರಂದು ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕಿರಿಯ ಲೆಕ್ಕ ಸಹಾಯಕರ ಹುದ್ದೆ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದ್ದು, ಈ ಉತ್ತರಗಳಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಡಿಸೆಂಬರ್ 26ರ ಸಂಜೆ 5:30ರ ಒಳಗೆ ಸಲ್ಲಿಸಬಹುದು ಎಂದು ಹೇಳಲಾಗಿದೆ.