ಬೆಂಗಳೂರು : ಕಾಟಾಚಾರಕ್ಕೆ ವಾಗ್ಧೇವಿ ದರ್ಶನ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯ ಎಂದು ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.
ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ವಾಗ್ದೇವಿ ದೇವಸ್ಥಾನಕ್ಕೆ ತೆರಳಿದ್ದಾಗ ಒಳಕ್ಕೆ ಹೋಗಲು ನಿರಾಕರಿಸಿ ಹೊರಗಡೆಯಿಂದಲೇ ಕೈ ಮುಗಿದು ಸಚಿವ ಎಂಬಿ ಪಾಟೀಲ್ ಅವರನ್ನು ಮುಂದೆ ಕಳುಹಿಸಿದ್ದರು. ಈ ವಿಡಿಯೋವನ್ನು ಬಿಜೆಪಿ ಟ್ವೀಟ್ ನಲ್ಲಿ ಹಂಚಿಕೊಂಡು ವಾಗ್ಧಾಳಿ ನಡೆಸುತ್ತಿದೆ.
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ. ಸಿಎಂ ಸಿದ್ದರಾಮಯ್ಯ ಅವರೇ, ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ..? ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.