alex Certify ಅನುಗ್ರಹ ಯೋಜನೆ : ಕುರಿ, ಮೇಕೆ, ಹಸು, ಎಮ್ಮೆ ಮರಣ ಪರಿಹಾರ ಮೊತ್ತ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಗ್ರಹ ಯೋಜನೆ : ಕುರಿ, ಮೇಕೆ, ಹಸು, ಎಮ್ಮೆ ಮರಣ ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು: ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಈ ಹಿಂದೆ, ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಯಲ್ಲಿದ್ದ ಅನುಗ್ರಹ ಯೋಜನೆಯನ್ನು ಪುನಃ ಜಾರಿಗೊಳಿಸಲಾಗಿದ್ದು, ಆ ಮೂಲಕ, ಗೋವುಗಳು ಹಾಗೂ ಕುರಿ- ಮೇಕೆ ಸತ್ತರೆ ನಗದು ಪರಿಹಾರವು ಸಂಬಂಧಿಸಿದ ರೈತರಿಗೆ ಸಿಗಲಿದೆ.

2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.

ಜಾನುವಾರು ಮಾಲೀಕರು ಸದರಿ ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ದೃಢೀಕರಿಸಿದ ನಂತರವೇ ಯೋಜನೆಯ ಪಡೆಯಬಹುದೆಂದು ಈ ಮೂಲಕ ತಿಳಿಸಿದೆ.

ಯೋಜನೆಯನ್ನು ಜಾನುವಾರುವಿನ ಪಶುವೈದ್ಯರಿಂದ ಸೌಲಭ್ಯವನ್ನು ಪಶುಸಖಿಯರು ಮೃತ ಪಟ್ಟ ಮಾಲೀಕರಿಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...