ಮಂಗಳೂರು: ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎನ್ನುವ ವದಂತಿ ಹರಡಿದೆ.
ಭೂಗತ ದೊರೆ ಮುತ್ತಪ್ಪ ರೈ ಆಪ್ತ ಬಳಗದಲ್ಲಿದ್ದ ಗುಣರಂಜನ್ ಶೆಟ್ಟಿ ಅವರನ್ನು ಅವರ ಆಪ್ತ ಬಳಗದಲ್ಲಿದ್ದ ಪುತ್ತೂರು ಮೂಲದ ಮನ್ವಿತ್ ರೈ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ಕುರಿತಾಗಿ ಯಾವುದೇ ದೂರು ದಾಖಲಾಗಿಲ್ಲ. ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿಯಾಗಿ ಗುಣರಂಜನ್ ಶೆಟ್ಟಿ ಅವರಿಗೆ ಪೊಲೀಸ್ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಪ್ರಸ್ತುತ ವಿದೇಶದಲ್ಲಿರುವ ಮನ್ವಿತ್ ರೈ ವಿಚಾರದ ಬಗ್ಗೆ ತಮಗೆ ಗೊತ್ತಿಲ್ಲ. ನಾನು ಯಾವುದೇ ಕೊಲೆಗೆ ಸಂಚು ನಡೆಸಿಲ್ಲ ಎಂದು ಹೇಳಿದ್ದಾರೆ.