alex Certify ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ಹೆಸರನ್ನ ಮೊದಲೇ ಬಾರಿಗೆ ಪ್ರಸ್ತಾಪಿಸಿದೆ ಅನ್ವರ್ ಮಣಿಪ್ಪಾಡಿಯವರು. ವಕ್ಫ್ ವರದಿಯನ್ನು ಮುಚ್ಚಿಹಾಕಲು ವಿಜಯೇಂದ್ರ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ಪ್ರತಿ ಮಾಧ್ಯಮಗಳಲ್ಲೂ ಘಂಟಾಘೋಷವಾಗಿ ಹೇಳಿದ್ದ ಮಾಣಿಪ್ಪಾಡಿಯವರು ಈಗ ವಿಜಯೇಂದ್ರರ ರಕ್ಷಣೆಗಾಗಿ ಮಾತು ಬದಲಿಸಲು ಎಷ್ಟು ‘ಆಫರ್’ ಬಂದಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರನ್ನು ಬಹಿರಂಗಪಡಿಸುವ ಬದಲು ಅವರು ವಿಜಯೇಂದ್ರ ಅವರ ಹೆಸರನ್ನು ಮಾತ್ರ ಏಕೆ ಹೇಳಿದರು? ಮಾಣಿಪ್ಪಾಡಿಯವರ ವಕ್ಫ್ ವರದಿಯನ್ನು ಮುಚ್ಚಿಹಾಕುವ ಪ್ರಯತ್ನದ ಕುರಿತು ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದರು. ಆ ಪತ್ರವನ್ನು ಈಗ ಬಹಿರಂಗಪಡಿಸಲಿ. ಮಾಣಿಪ್ಪಾಡಿಯವರ ಮತ್ತು ಬಿಜೆಪಿ ಗೆಳೆಯರ ನೆನಪುಗಳನ್ನು ರಿಫ್ರೆಶ್ ಮಾಡಲು ದಯವಿಟ್ಟು ವೀಡಿಯೊಗಳು ಮತ್ತು ಪತ್ರಿಕಾ ಲೇಖನಗಳನ್ನು ಅತ್ಯಂತ ಗಮನ ಕೊಟ್ಟು ನೋಡಲಿ ಎಂದು ತಿಳಿಸಿದ್ದಾರೆ.

ಬಿಜೆಪಿ, ಅವರ ಮಾಜಿ ಮುಖ್ಯಮಂತ್ರಿಗಳ ಹಾಗೂ ಅವರ ಅಧ್ಯಕ್ಷರ ಮರ್ಯಾದೆ ಉಳಿಸಲು ನಿನ್ನೆ ಇಡೀ ರಾತ್ರಿ ಮಾಣಿಪ್ಪಾಡಿಯವರ ಕೈ ಕಾಲು ಹಿಡಿದು ಗೋಳಾಡಿರಬಹುದೇ? ಸತ್ಯಕ್ಕಾಗಿ ಹಾಗೂ ಸಮುದಾಯಕ್ಕಾಗಿ ಹುತಾತ್ಮರಾಗಲು ಸಿದ್ಧನಿದ್ದೇನೆ ಎಂದಿದ್ದ ಮಣಿಪ್ಪಾಡಿಯವರಿಗೆ ಈಗ ಏನಾಯಿತು ಎಂದು ಖರ್ಗೆ ಪ್ರಶ್ನಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...