ಎನಿವೇರ್ ರಿಜಿಸ್ಟ್ರೇಷನ್ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ.
ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಎನಿವೇರ್ ನೋಂದಣಿ ವ್ಯವಸ್ಥೆಯನ್ನು ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗಿದೆ.
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜು ನೋಂದಣಿ ಮಾಡಲು ಅವಕಾಶವಿತ್ತು. ಆದರೆ, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆ ಒಳಗೆ ತಮಗೆ ಹತ್ತಿರ ಇರುವ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದಾಗಿದೆ.