alex Certify YSR ಕಾಂಗ್ರೆಸ್ ಪಕ್ಷಕ್ಕೆ ಜೀವಿತಾವಧಿಗೆ ಅಧ್ಯಕ್ಷರಾಗಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

YSR ಕಾಂಗ್ರೆಸ್ ಪಕ್ಷಕ್ಕೆ ಜೀವಿತಾವಧಿಗೆ ಅಧ್ಯಕ್ಷರಾಗಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರನ್ನು ವೈ.ಎಸ್‌.ಆರ್‌.ಸಿ.ಪಿ. ಜೀವಿತಾವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಜುಲೈ 9 ರಂದು ಯುವಜನ ಶ್ರಮಿಕ ರೈತ ಕಾಂಗ್ರೆಸ್(YSRC) ನ ‘ಜೀವಮಾನದ ಅಧ್ಯಕ್ಷರಾಗಿ’ ಜಗನ್ ಅವರು ಆಯ್ಕೆಯಾದರು. ಪಕ್ಷದ ಸಂವಿಧಾನದ ತಿದ್ದುಪಡಿಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಪಕ್ಷದ ಸಂಸದೀಯ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಅವರು, ಜಗನ್ ಮೋಹನ್ ರೆಡ್ಡಿ ಅವರನ್ನು ವೈ.ಎಸ್‌.ಆರ್‌.ಸಿ.ಪಿ.ಯ ಆಜೀವ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಜೂನ್ 8 ರಂದು, ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ತಾಯಿ ವಿಜಯಮ್ಮ ಅವರು ತೆಲಂಗಾಣದಲ್ಲಿ ತಮ್ಮ ಪುತ್ರಿ ವೈ.ಎಸ್. ಶರ್ಮಿಳಾ ಅವರಿಗೆ ನೆರವಾಗಲು ವೈ.ಎಸ್‌.ಆರ್‌.ಸಿ.ಪಿ. ಗೌರವಾಧ್ಯಕ್ಷ ಸ್ಥಾನದಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...