alex Certify ಸರ್ಕಾರದ ಅನುಮತಿ ಇಲ್ಲದೆ ವಿದೇಶ ಪ್ರವಾಸ: ಹಿರಿಯ ಐಪಿಎಸ್ ಅಧಿಕಾರಿ ʼಸಸ್ಪೆಂಡ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಅನುಮತಿ ಇಲ್ಲದೆ ವಿದೇಶ ಪ್ರವಾಸ: ಹಿರಿಯ ಐಪಿಎಸ್ ಅಧಿಕಾರಿ ʼಸಸ್ಪೆಂಡ್ʼ

ಆಂಧ್ರಪ್ರದೇಶ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಪಿ.ವಿ. ಸುನಿಲ್ ಕುಮಾರ್ ಅವರನ್ನು ಅಮಾನತುಗೊಳಿಸಿದೆ. ವೈಎಸ್‌ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸರ್ಕಾರದ ಪೂರ್ವಾನುಮತಿ ಪಡೆಯದೆ ವಿದೇಶ ಪ್ರವಾಸ ಕೈಗೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿಜಿಪಿ ಶ್ರೇಣಿಯ ಅಧಿಕಾರಿಯಾಗಿರುವ ಪಿ.ವಿ. ಸುನಿಲ್ ಕುಮಾರ್ ಅವರು ಹುದ್ದೆ ನಿರೀಕ್ಷೆಯಲ್ಲಿದ್ದರು. ಆದರೆ, ಸರ್ಕಾರದ ಅನುಮತಿ ಪಡೆಯದೆ ವಿದೇಶ ಪ್ರವಾಸ ಕೈಗೊಂಡಿದ್ದರಿಂದ ಅವರನ್ನು ಅಮಾನತುಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...