alex Certify SHOCKING: ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಘಟನೆ ನಡೆದಿದೆ.

ಎಂಎಲ್ಎ ಲೇಔಟ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಲ್ಕನಿಯಲ್ಲಿ ಆಟವಾಡುತ್ತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಶಾಲೆ ಮುಗಿಸಿ ಮಧ್ಯಾಹ್ನ ಮನೆಗೆ ವಾಪಸ್ ಆಗಿದ್ದ ಮೃತ ಬಾಲಕ ಅದಿತ್ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...