ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 28,425 ರೂ.ನಿಂದ 87,125 ರೂ., ಅಂಗೀಕೃತ ವಿವಿಯಿಂದ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.
ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳು ಶೇಕಡ 55 ಅಂಕಗಳೊಂದಿಗೆ ಪಾಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇಕಡ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು. ವಿವಿಧ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
https://www.emsecure/ApexBankApplication/index.html ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ.