ಬೆಂಗಳೂರು: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಎಪಿಎಲ್, ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ.
ಹೊಸ ಪಡಿತರ ಚೀಟಿಗಳಿಗೆ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿ ತಿದ್ದುಪಡಿಗೆ ಸಂಜೆ 4 ರಿಂದ 6 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗೆ ಅವಕಾಶ ನೀಡಲಾಗಿದೆ.