ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದೆ.
ಇದೇ ವೇಳೆ ಎಪಿಎಲ್ ಕಾರ್ಡ್ ಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ. ಯಾವುದೇ ಎಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ನಿರ್ದೇಶನ ನೀಡಿಲ್ಲ ಎಂದು ತಿಳಿಸಿದೆ.
ಇ-ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದದ್ದು. ರಾಜ್ಯದಲ್ಲಿ ಕಳೆದ ಸೆ.2ರಂದು 25,13,798 ಎಪಿಎಲ್ ಕಾರ್ಡ್ ಗಳಿದ್ದವು. ನ.16 ಇಂದು 25,62,566 ಕಾರ್ಡುಗಳಿವೆ. ಅನರ್ಹ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಕಾರಣ ಕೆಲ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ. ಆದರೆ ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದು ಎಂಬುದು ಸುಳ್ಳು ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.