ಮಂಡ್ಯ: ಮುಜರಾಯಿ ದೇವಾಲಯಗಳ ಅರ್ಚಕರ ಖಾತೆಗೆ ನೇರವಾಗಿ ತಸ್ತೀಕ್ ಹಣ ವರ್ಗಾವಣೆ ಮಾಡಲು ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗುತ್ತಿದೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿಉಕ್ಕಡ ಅಹಲ್ಯಾದೇವಿ ದೇವಾಲಯಕ್ಕೆ ಭೇಟಿ ನೀಡಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಚಕರ ತಸ್ತೀಕ್ ಹಣವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲು ಆ್ಯಪ್ ಸಿದ್ಧಪಡಿಸುತ್ತಿದ್ದು, ಇನ್ನೊಂದು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಅರ್ಚಕರು ಅಥವಾ ನೌಕರ ತೀರಿಕೊಂಡರೆ 35 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಆ ಮೊತ್ತವನ್ನು 2 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಅರ್ಚಕರು ಮತ್ತು ದೇವಾಲಯಗಳ ನೌಕರರ ಮಕ್ಕಳಿಗೆ ಶಿಷ್ಯವೇತನ ನೀಡಲಾಗುತ್ತಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಒಂದು ತಿಂಗಳಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.