ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದಾಗಿ ಈ ವರ್ಷ ಶೈಕ್ಷಣಿಕ ಚಟುವಟಿಕೆಗಳು ವಿಳಂಬವಾಗಿವೆ. 9 ರಿಂದ ದ್ವಿತೀಯ ಪಿಯುಸಿವರೆಗೆ ಇಂದಿನಿಂದ ಪೂರ್ಣಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ.
9, 10 ನೇ ತರಗತಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಇಂದಿನಿಂದ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ. 6 -8 ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆಯ ಮೂಲಕ ಶೈಕ್ಷಣಿಕ ಚಟುವಟಿಕೆ ಮುಂದುವರೆಸಲಾಗಿದೆ.
ಒಂದರಿಂದ ಐದನೇ ತರಗತಿ ಮಕ್ಕಳ ಶಾಲೆ ಇನ್ನೂ ಆರಂಭವಾಗಿಲ್ಲ. ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರೇಡಿಯೋ ಪಾಠದ ಮೂಲಕವೂ ಶೈಕ್ಷಣಿಕ ಚಟುವಟಿಕೆ ನಡೆಸಲಾಗುತ್ತಿದೆ. ಮೊಬೈಲ್ನಲ್ಲಿ ಆಪ್ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಮನೆಯಲ್ಲಿ ರೇಡಿಯೋ ಪಾಠ ಕೇಳಬಹುದಾಗಿದೆ ಎಂದು ಹೇಳಲಾಗಿದೆ.