ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಮನಸ್ಸಿಗೆ ಬಂದಂತೆ ಕಂಪನಿಗಳು ಬಿಯರ್ ಬೆಲೆ ಹೆಚ್ಚಳ ಮಾಡುವುದರಿಂದ ಚಿಲ್ಲರೆ ಮದ್ಯ ಮಾರಾಟಗಾರರು ನಗೆಪಾಟಲಿಗೆ ಈಡಾಗುವಂತಾಗಿದೆ. ಸರ್ಕಾರ ಕಂಪನಿಗಳ ಮೇಲೆ ನಿಯಂತ್ರಣ ಹೊಂದಬೇಕು. ವರ್ಷಕ್ಕೊಮ್ಮೆ ಮಾತ್ರ ಮದ್ಯದ ದರ ಹೆಚ್ಚಳಕ್ಕೆ ಅವಕಾಶ ಕಲ್ಪಿಸಬೇಕು ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.
ಆಗಾಗ ಬೆಲೆ ಹೆಚ್ಚಳವಾದರೆ ಗ್ರಾಹಕರು ಮಾರಾಟಗಾರರ ಬಗ್ಗೆ ತಪ್ಪು ತಿಳಿಯುತ್ತಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಒತ್ತಾಯಿಸಿದ್ದಾರೆ.