ಬೆಂಗಳೂರು: ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE) ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಸರ್ಕಾರದ ಯಾವುದೇ ಅನುದಾನವಿಲ್ಲದೆ ಐಸಿಎಸ್‌ಸಿ ಶಾಲೆ ನಡೆಸುತ್ತಿರುವ ಮೈಸೂರಿನ ಜ್ಞಾನ ಸರೋವರ ಎಜುಕೇಶನ್ ಟ್ರಸ್ಟ್ ನಿಂದ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.
ಆರ್.ಟಿ.ಇ. ಕಾಯ್ದೆಯಲ್ಲಿನ ನಿಯಮಗಳನ್ನು ಪಾಲಿಸದ ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು 2021ರ ನವೆಂಬರ್ 23 ರಂದು 1.61 ಕೋಟಿ ರೂ. ದಂಡ ವಿಧಿಸಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆರ್‌ಟಿಇ ಕಾಯ್ದೆಯ ನಿಯಮ 18ರ ಪ್ರಕಾರ ಮತ್ತು ಕರ್ನಾಟಕ ಆರ್‌ಟಿಇ ಕಾಯ್ದೆಯ ನಿಯಮ 11ರಂತೆ ಸರ್ಕಾರ ಹೊರತುಪಡಿಸಿ ಇತರೆ ಎಲ್ಲಾ ಶಾಲೆಗಳು ಸಕ್ಷಮ ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು. ವಸತಿ ಶಾಲೆಗಳಿಗೂ ಆರ್‌ಟಿಇ 2009ರ ಅಂಶಗಳು ಅನ್ವಯವಾಗುತ್ತವೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.