ಶಿವಮೊಗ್ಗ : ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲಗೌರವ ಪ್ರಶಸ್ತಿ ಕೊಡಮಾಡುತ್ತಿದ್ದು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.
ಕ್ರೀಡೆ, ನೃತ್ಯ, ಸಂಗೀತ, ಚಿತ್ರಕಲೆ, ಬಹುಮುಖ ಪ್ರತಿಭೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ ಆರು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದು ಪುರಸ್ಕತರಾಗಿರಬೇಕು.
ಆಸಕ್ತ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ನ.18 ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ.ಕಾಲೋನಿ, ಲಕಮನಹಳ್ಳಿ, ಧಾರವಾಡ-580004, ಈ ವಿಳಾಸಕ್ಕೆ ಪೋಸ್ಟ್ ಮುಖಾಂತರ ಸಲ್ಲಿಸುವುದು. ಅರ್ಜಿ ನಮೂನೆ ಹಾಗೂ ಪ್ರಶಸ್ತಿಗೆ ಮಾನದಂಡವನ್ನು ವೆಬ್ಸೈಟ್ http://balavikasaacademy.karnataka.gov.in ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ.ಕಾಲೋನಿ, ಲಕಮನಹಳ್ಳಿ, ಧಾರವಾಡ-580004, ದೂ.ಸಂ.: 0836-2461666 ನ್ನು ಸಂಪರ್ಕಿಸುವುದು.