ಬಳ್ಳಾರಿ : ಕಲಬುರಗಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ನೀಡಲಾಗುತ್ತಿದ್ದು, 2024ರ ಜನವರಿಯಿಂದ ಪ್ರಾರಂಭವಾಗಲಿವೆ. ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.
ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರುತ್ತದೆ. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ ವಿಶೇಷ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು.
ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿಂದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು ಎಂದು ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಪಡೆಯುವ ಮತ್ತು ಕಳುಹಿಸುವ ವಿಳಾಸ
ಪ್ರಾಂಶುಪಾಲರು,
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್,
ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ-585105.
ದೂ.08472-245340, ಮೊ.9916726886, ಮೊ.9742307153, ಮೊ.9113916753.