alex Certify ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು  ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 36 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ, 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ನಗರದಲ್ಲಿ 2021 ರ ಡಿಸೆಂಬರ್ ತಿಂಗಳಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಧಾಪಿಸುವುದರ ಮೂಲಕ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ. ಈ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ ಕಛೇರಿಯಲ್ಲಿ ನುರಿತ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳಿಗೆ ಕರಾಮುವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತಿದ್ದು,ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರವು 2021-22 ಜನವರಿ ಆವೃತ್ತಿಯಲ್ಲಿ 95 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುತ್ತಾರೆ.

2022-23 ಜುಲೈ ಆವೃತ್ತಿಯಲ್ಲಿ 267 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ದ್ವಿತೀಯ ವರ್ಷಕ್ಕೆ 4 ವಿದ್ಯಾರ್ಥಿಗಳು ನವೀಕರಣಗೊಂಡಿರುತ್ತಾರೆ. 2022-23 ಜನವರಿ ಆವೃತ್ತಿಯಲ್ಲಿ 165 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ದ್ವಿತೀಯ ವರ್ಷಕ್ಕೆ 78 ವಿದ್ಯಾರ್ಥಿಗಳು ನವೀಕರಣಗೊಂಡಿರುತ್ತಾರೆ. 2023-24 ಜುಲೈ ಆವೃತ್ತಿಯಲ್ಲಿ 353 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ದ್ವಿತೀಯ ವರ್ಷಕ್ಕೆ 186 ವಿದ್ಯಾರ್ಥಿಗಳು ನವೀಕರಣಗೊಂಡಿರುತ್ತಾರೆ.

ಪರೀಕ್ಷಾ ಕೇಂದ್ರ ಮತ್ತು ವಾರಾಂತ್ಯ ಸಂಪರ್ಕ ತರಗತಿಗಳು:-ಕರಾಮುವಿಯ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳು ಮಡಿಕೇರಿಯ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲೇ ನಡೆಯುತ್ತವೆ. ಕರಾಮುವಿಯ ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯಗಳಿಗೆ ಪ್ರಯೋಗಿಕ ತರಗತಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ನಡೆಸಲು ಕ್ರಮವಹಿಸಲಾಗುತ್ತಿದೆ.

‘2023-24ರ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ:-ಪ್ರಸ್ತುತ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಪ್ರಕಟಣೆಯು ದಿನಾಂಕ 10.01.2024 ರಿಂದ ಪ್ರಾರಂಭವಾಗಿದ್ದು, ಪ್ರವೇಶಾತಿ ಪ್ರಕ್ರಿಯೆಗಳು ನಡೆಯುತ್ತಿವೆ, ಮಾರ್ಚ್ 31, 2023 ಕೊನೆಯ ದಿನವಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ . ಬಿ.ಎಸ್.ಡಬ್ಲ್ಯೂ ಹಾಗೂ ಬಿ.ಎಸ್ಸಿ (General, Home Science, and I.T) ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಕರಾಮುವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸುವುದೇನೆಂದರೆ ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ KSOU Admission Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಅನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ -571201 ದೂರವಾಣಿ ಸಂಖ್ಯೆ:- 08272-201147, 8073342310, 9141938803, 9483391260, 8296215714, ವಸಂಪರ್ಕಿಸಬಹುದು ಎಂದು ರಾಜ್ಯ ಮುಕ್ತ ವಿಶ್ವವಿದ್ಯಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ ಒದಗಿಸಿರುವ ರಿಯಾಯಿತಿಗಳು ಬೋಧನಾ ಶುಲ್ಕ ರಿಯಾಯಿತಿ:-ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು. ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು. ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 25 ರಷ್ಟು ರಿಯಾಯಿತಿ ಇರುತ್ತದೆ. ಕೆಎಸ್‍ಆರ್‍ಟಿಸಿ/ ಬಿಎಂಟಿಸಿ/ ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ/ಕೆಕೆಆರ್‍ಟಿಸಿ ನೌಕರರುಗಳಿಗೆ ಸ್ನಾತಕ/ ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 25 ರಷ್ಟು ರಿಯಾಯಿತಿ ಇರುತ್ತದೆ.

ಪೂರ್ಣ ಶುಲ್ಕ ವಿನಾಯಿತಿ:- ತೃತೀಯ ಲಿಂಗದ (Transgender) ವಿದ್ಯಾರ್ಥಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಬಿಇಡಿ/ ಎಂಬಿಎ ಹೊರತುಪಡಿಸಿ)ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಆ ತಂದೆ / ತಾಯಿಯ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣಕ್ರಮಗಳಿಗೆ ಉಚಿತ ಪ್ರವೇಶಾತಿ ನೀಡಲಾಗುವುದು.

ವಿಶೇಷ ಸೂಚನೆ:-ಕರಾಮುವಿಯಲ್ಲಿ ಪ್ರವೇಶಾತಿ ಪಡೆಯುವ ಎಸ್‍ಸಿ, ಎಸ್‍ಟಿ, ಒಬಿಸಿ ವಿದ್ಯಾರ್ಥಿಗಳಿಗೂ ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್‍ಎಸ್‍ಪಿ ಮುಖಾಂತರ ವಿದ್ಯಾರ್ಥಿ ವೇತನವಿರುತ್ತದೆ ಅಥವಾ ಪೂರ್ಣ ಶುಲ್ಕ ಮರುಭರಿಕೆಯಾಗುತ್ತದೆ.

ಕ.ರಾ.ಮು.ವಿ.ಯ ವೈಶಿಷ್ಟ್ಯತೆಗಳು/ಸೌಲಭ್ಯಗಳು; ಪ್ರತಿ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ, ಪ್ರತಿ ತಾಲ್ಲೂಕಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ. ಎಲ್ಲಾ ಶೈಕ್ಷಣಿಕ ಕ್ರಮಗಳ ಕಲಿಕಾ ಅಧ್ಯಯನ ಸಾಮಗ್ರಿ ಡಿಜಿಟಲೀಕರಣ, ಪ್ರತ್ಯೇಕ KSOU Academic Platform App ನ ಬಳಕೆ ಆನ್‍ಲೈನ್‍ನಲ್ಲಿ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಅಭ್ಯಸಿಸಲು ಅವಕಾಶ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗ ರಚನೆ, ರಾಜ್ಯದ ಎಲ್ಲೆಡೆ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರಗಳ ಆಯೋಜನೆ. `ದೃಶ್ಯವಾಹಿನಿ’ ಯೂಟ್ಯೂಬ್ ಚಾನೆಲ್ ಸ್ಥಾಪನೆ, ಅಧ್ಯಾಪಕರ ಬೋಧನಾ ವಿಡಿಯೋ ವಿದ್ಯಾರ್ಥಿಗಳಿಗೆ ಲಭ್ಯ. ಕ.ರಾ.ಮು.ವಿ. `ಪ್ರಸಾರಾಂಗ’, ರೇಡಿಯೋ ಸ್ಥಾಪನೆ. ಕ.ರಾ.ಮು.ವಿ. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮೂಲಕ ಅತ್ಯಂತ ಕನಿಷ್ಠ ಶುಲ್ಕದಲ್ಲಿ ತರಬೇತಿ ನೀಡಲಾಗುತ್ತಿದೆ.

ವಿದ್ಯಾರ್ಥಿಗಳ, ಸರ್ಕಾರಿ/ ಅರೆ ಸರ್ಕಾರಿ ನೌಕರರು ಹಾಗೂ ಖಾಸಗಿ ನೌಕರರ ಅನುಕೂಲಕ್ಕಾಗಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ಎರಡನೇ/ನಾಲ್ಕನೇ ಶನಿವಾರ, ಭಾನುವಾರ ಹಾಗೂ ರಜಾ ದಿನಗಳಂದು ಪ್ರವೇಶಾತಿಯನ್ನು ನೀಡಲಾಗುವುದು ಎಂದು ಮೈಸೂರು ಕ.ರಾ.ಮು.ವಿ.ದ ಕುಲಪತಿ ಪ್ರೊ..ಶರಣಪ್ಪ ವಿ.ಹಲಸೆ, ಮೈಸೂರು ಕ.ರಾ.ಮು.ವಿ.ದ ಕಾರ್ಯನಿರ್ವಾಹಕ ಅಭಿಯಂತರರಾದ ಭಾಸ್ಕರ್, ಮಡಿಕೇರಿ ಕ.ರಾ.ಮು.ವಿ.ಪ್ರಾದೇಶಿಕ ಕೇಂದ್ರದ ಮುಕ್ಕಾಟೀರ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...