ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು www.karnemakaone.kar.nic.in/abcd/ ವೆಬ್ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.