ಶಿವಮೊಗ್ಗ : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ದೈಹಿಕ ಶಿಕ್ಷಣ ವಿಭಾಗ, ಪಶುವೈದ್ಯಕೀಯ ಸಂಕೀರ್ಣಶಾಸ್ತ್ರ (ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ/ ಪರೋಪಜೀವ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು ದಿನಾಂಕ: 16/06/2023ರಂದು ಬೆಳಿಗ್ಗೆ 11.00ಕ್ಕೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಹಾಜರಿದ್ದು, ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ಹಾಗೂ ದೂ.ಸಂ.: 08182-200872 ನ್ನು ಸಂಪರ್ಕಿಸುವುದು.