alex Certify 2023-24ನೇ ಸಾಲಿನ ‘ಬಾಲಗೌರವ ಪ್ರಶಸ್ತಿ’ ಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2023-24ನೇ ಸಾಲಿನ ‘ಬಾಲಗೌರವ ಪ್ರಶಸ್ತಿ’ ಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಸೇರಿ 07 ಕ್ಷೇತ್ರದಲ್ಲಿ ಅಸಾಧರಣೆ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು.

ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಾಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು.
ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಮತ್ತು ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಪ್ರಶಸ್ತಿಗಾಗಿ ಅರ್ಜಿ ನಮೂನೆ ಹಾಗೂ ಮಾನದಂಡಗಳನ್ನು ಕಚೇರಿಯ ವೆಬ್‌ಸೈಟ್ ಲಿಂಕ್ http://balavikasaacademy.karnataka.gov.in/ ಗೆ ಭೇಟಿ ನೀಡಿ ವೀಕ್ಷಿಸಬಹುದು.ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಲಕ್ಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.0836-2461666 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...