ಶಿವಮೊಗ್ಗ; 25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಲಿಂಕ್ https://swdservices.karnataka.gov.in ಮೂಲಕ ಅರ್ಜಿಯನ್ನು ಆ.31 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಪೃಥ್ವಿ ಮ್ಯಾನ್ಷನ್, ವಿನೋಬನಗರ, 100 ಅಡಿರಸ್ತೆ, ಶಿವಮೊಗ್ಗ, ದೂ.ಸಂ. : 08182-249241 ಮತ್ತು 9480843044 ಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.