ಧಾರವಾಡ : 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ (ಸಿಎಚ್ಡಿ), ತರಕಾರಿ ಬೀಜಗಳ ಮಿನಿಕಿಟ್ನ್ನು ಉಚಿತವಾಗಿ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ವಿತರಿಸಲಾಗುವುದು.
ಮಿನಿಕಿಟ್ ಪಡೆಯಲು ರೈತರು ತಮ್ಮ ಜಮೀನ ಉತಾರ, ಆಧಾರ ಪ್ರತಿ, ಬ್ಯಾಂಕ್ ಪಾಸ್ಬುಕ್ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಕಲಘಟಗಿ ತೋಟಗಾರಿಕೆ ಕಛೇರಿಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.