ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಲ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶೀಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 7, 8, 9 ನೇ ತರಗತಿ ಮಧ್ಯಂತರ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ತಾಲೂಕು ಕುಂಸಿಯಲ್ಲಿನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಸಾಗರ ತಾಲೂಕಿನ ಆವಿನಹಳ್ಳೀ ಅಟಲ್ ಬಿಹಾರಿ ಪಾಜಪೇಯಿ ವಸತಿಶಾಲೆ, ತೀರ್ಥಹಳ್ಳಿ ತಾಲೂಕಿನ ಅಗ್ರಹಾರ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿಶಾಲೆ, ಹೊಸನಗರ ತಾಲೂಕಿನ ಹುಂಚ ಡಾ. ಬಿ.ಆರ್. ಅಂಬೇಡ್ಕರ್ ವಸತಿಶಾಲೆ, ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀಮತಿ ಇಂದಿರಾ ಗಾಂಧಿ ವಸತಿಶಾಲೆ ಹಾಗೂ ಶಿಕಾರಿಪುರ ತಾಲೂಕಿನ ಬೇಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆಸಕ್ತ ಪ.ಜಾ/ಪ.ವ/ಸಾಮಾನ್ಯ / ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಗಳಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂ. 10ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರವೇಶ ಪರೀಕ್ಷೆಯು ಜೂನ್ 15 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದೆ.