ಶಿವಮೊಗ್ಗ : ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕಾಗಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕೇಂದ್ರ ಪುರಸ್ಕತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ನ್ಯಾಷನಲ್ ಸ್ಕಾಲರ್ಶಿಪ್ ಪೊರ್ಟಲ್ ಮುಖಾಂತರ ಅನುಷ್ಟಾನಗೊಳಿಸುತ್ತಿದ್ದು, ರಾಜ್ಯದ ಟಾಪ್ ಸ್ಕೂಲ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖಾಂತರ ಸೆ.19 ರಂದು ಪರೀಕ್ಷೆ ನಡೆಸಲಾಗುತ್ತಿದೆ.
ಈ ಯೋಜನೆಗೆ ಅರ್ಹರಿರುವ ವಿದ್ಯಾರ್ಥಿಗಳು ಆಗಸ್ಟ್ – 10 ರೊಳಗಾಗಿ https://yet.nta.ac.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.