alex Certify ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2023-24 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆಗಳು: ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ),3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು.

ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಪಡೆದಿರಬೇಕು ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕಪಟ್ಟಿಯಲ್ಲಿರುವಂತೆ) ಡಿಸೆಂಬರ್-31 2023ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 1 ಜನವರಿ 2023 ರಿಂದ 1 ಜುಲೈ 2006 (17ವರೆ ವರ್ಷದಿಂದ 21 ವರ್ಷ)ರ ದಿನಾಂಕಗಳ ನಡುವೆ ಜನಿಸಿರಬೇಕು.

*ತರಬೇತಿ ನೀಡುವ ಸ್ಥಳಗಳು:
ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್-ಸೈಟ್ https://bcwd. karnataka.gov.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 15 ಆಗಿರುತ್ತದೆ.ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲೆ ದೂ.ಸಂ:0824-2225078, ಉಡುಪಿ ಜಿಲ್ಲೆ ದೂ.ಸಂ:0820-2574881, ಉತ್ತರ ಕನ್ನಡ ದೂ.ಸಂ:08382-226589 ಹಾಗೂ ಕೇಂದ್ರ ಕಚೇರಿಯ ಮೊ.8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...