ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ.
2023-24ನೇ ಸಾಲಿನಲ್ಲಿ ಕುರುಗೋಡು ಪುರಸಭೆಗೆ ಒಟ್ಟು 66 ವೈಯಕ್ತಿಕ ಶೌಚಾಲಯ ಗುರಿ ನಿಗಧಿಪಡಿಸಿದ್ದು, ವೈಯಕ್ತಿ ಶೌಚಾಲಯಗಳನ್ನು ಹೊಂದದೇ ಇರುವ ಮತ್ತು ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿಗಳನ್ನು ಜ.06ರೊಳಗಾಗಿ ಕಚೇರಿ ಸಮಯದಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿ ಅಥವಾ ದೂ.08393-263166ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.