ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರಿಗೆ ಮಾಹೆಯಾನ ರೂ.1 ಸಾವಿರಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು 2024-25ನೇ ಸಾಲಿನಲ್ಲಿ ಜಾರಿಗೊಳಿಸಲಾಗಿದೆ.
ಆದ್ದರಿಂದ ಜಿಲ್ಲೆಯಲ್ಲಿ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಯಾಯ ತಾಲ್ಲೂಕಿನ ಎಂಆರ್ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.