ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದೆ. ಈ ಸಂಬಂಧ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40 ರಷ್ಟು, ಎಸ್.ಸಿ/ಎಸ್.ಟಿಗೆ ಶೇಕಡ 35ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿದ್ದಾರೆ.
ಹಾಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ‘ಡಿ’ ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬಂಧಪಟ್ಟ ಉಪ ನಿರ್ದೇಶಕರು/ ಮುಖ್ಯ ಗ್ರಂಥಾಲಯಾಧಿಕಾರಿಗಳ ಮುಖಾಂತರ, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಚಾರಕರು ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿಯ ಜೊತೆಗೆ ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣಪತ್ರ, ನಡವಳಿಕೆ ಪ್ರಮಾಣ ಪತ್ರಗಳ ಪ್ರತಿ ಲಗತ್ತಿಸಬೇಕು.
ಸಾಮಾನ್ಯ ಅಭ್ಯರ್ಥಿಗಳು ಪಿಯುಸಿ ಅಂಕಪಟ್ಟಿ, ಜಾತಿ, ಕನ್ನಡ ಮಾಧ್ಯಮ/ಗ್ರಾಮೀಣ ಮಹಿಳೆ/ಮಾಜಿ ಸೈನಿಕ/371 ಎ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 19 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗೆ ಕಚೇರಿ ವೇಳೆಯಲ್ಲಿ ಉಪ ನಿರ್ದೇಶಕರ ಕಚೇರಿ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ ಬೇಂಗಳೂರು 560001. ದೂ.ಸಂ.080-22212128, ಉಪ ನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಡಿ.ಸಿ. ಕಚೇರಿಯ ಆವರಣ, ಧಾರವಾಡ 580001. ದೂ.ಸಂ. 0836-2442465. ಉಪ ನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು-575 003. ದೂ.ಸಂ. 0824-2425873 ಹಾಗೂ ಉಪ ನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಎಂ.ವಿ.ಎಚ್.ಎಸ್ ಶಾಲೆ ಆವರಣ, ಸೂಪರ್ ಮಾರ್ಕೆಟ್, ಜಗತ್ ವೃತ್ತ, ಕಲಬುರಗಿ-585 101. ದೂರವಾಣಿ ಸಂ:08472-221543 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ತಿಳಿಸಿದ್ದಾರೆ.