ಡಿಜಿಟಲ್ ಡೆಸ್ಕ್ : ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 20 ಲಕ್ಷ ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುವುದು. ಆಸಕ್ತಿವುಳ್ಳ ಅಭ್ಯರ್ಥಿಗಳು ಪಿಎಂಇಜಿಪಿ ವೆಬ್ಸೈಟ್: www.kviconline.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.