ಗಮನಿಸಿ : ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು : ಉತ್ತರ ಖಂಡ ರಾಜ್ಯದ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಜುಲೈ 2024ನೇ ಅಧಿವೇಶನಕ್ಕೆ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ-ಬಾಲಕಿಯರಿಗೆ ಅರ್ಹತಾಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 2 2023 ರಂದು ನಡೆಯಲ್ಲಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 01-07-2024 ರಂತೇ 11 ½ ವರ್ಷದಿಂದ 13 ವರ್ಷದೊಳಗಿರುವ ( ದಿನಾಂಕ : 2-7-2011 ರಿಂದ 1-1-2013 ರೊಳಗೆ ಜನಿಸಿರುವ) ಮಾತ್ರ ಪರೀಕ್ಷೆಗೆ ಅರ್ಹರಿರುತ್ತಾರೆ.

ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600 ಹಾಗೂ ಪರಿಶಿಷ್ಟ ಜಾತಿ-ಪಂಗಡದವರಿಗೆ ರೂ. 555 ಗಳನ್ನು ಆನ್ ಲೈನ್ www.rimc.gov.in ಮೂಲಕ ಪಾವತಿ ಮಾಡಿ ಪ್ರಾಸ್ ಪೆಕ್ಟಸ್ ಕಮ್ ಅರ್ಜಿ ನಮೂನೆ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಪಡೆಯಬಹುದು.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಅಕ್ಟೋಬರ್ 15. 2023 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಭವನ್, ನಂ.58 ಫೀಲ್ಡ ಮಾರ್ಷಲ್ ಕೆ.ಎಂ ಕಾರ್ಯಪ್ಪ ರಸ್ತೆ ಬೆಂಗಳೂರು -25 ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.080-245589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯಾಲಯವನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read