ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವಿದ್ಯಾರ್ಥಿಗಳ ವ್ಯಾಸಂಗವನ್ನು ಉತ್ತೇಜಿಸಲು 2024-25ನೇ ಸಾಲಿಗೆ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಗಳನ್ನು ನ್ಯಾಷನಲ್ ಇ-ಸ್ಕಾಲರ್ ಶಿಪ್ ಪೋರ್ಟಲ್ (http://scholarships.gov.in) ನಲ್ಲಿ ಸಲ್ಲಿಸಬಹುದು.
ಪ್ರೀ-ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿಗಳನ್ನು ಆಗಸ್ಟ್ 31 ರೊಳಗೆ ಹಾಗೂ ಪೋಸ್ಟ್ –ಮೆಟ್ರಿಕ್ ವಿದ್ಯಾರ್ಥಿಗಳು ಅಕ್ಟೋಬರ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಣಿ ಸಂಖ್ಯೆ 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.