ಮಡಿಕೇರಿ : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ವಿದ್ಯಾರ್ಥಿಗಳ ಕೋರ್ಸ್, ಸ್ಟೈಫಂಡ್ ಮತ್ತು ಲ್ಯಾಪ್ಟಾಪ್ ಪೂರ್ಣ ಶುಲ್ಕ ಒದಗಿಸಲಾಗುತ್ತಿದ್ದು, ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ https://fellowship.tribal.gov.in ನ್ನು ಸಂಪರ್ಕಿಸಲು ಕೋರಿದೆ. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ- 9901482763. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 9482894676 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 7259552655 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.