ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20ರಿಂದ 40 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ http://karnatakasahithyaacademy.org ಇಲ್ಲಿ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ಅಥವಾ ದೂರವಾಣಿ: 080-22211730, 29601730, 22106460 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read