alex Certify ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ https://ssp.postmatric.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡು ಮಾಡಿಕೊಂಡಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ, ಬೆಂಗಳೂರು ಅಥವಾ ವೆಬ್ ಸೈಟ್ :https://ssp.postmatric.karnataka.gov.in ಅಥವಾ ದೂರವಾಣಿ ಸಂಖ್ಯೆ: 080-26711096 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...