ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳುಗಳಿಗೆ ಮೆಟ್ರಿಕ್ ಪೂರ್ವ / ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಬ್ಯಾಂಕ್ ಖಾತೆ ಅಥವಾ ಐಪಿಪಿಬಿ (post office)ಖಾತೆಯನ್ನು ಹೊಂದಿರಬೇಕು ಹಾಗೂ ವಿದ್ಯಾರ್ಥಿಗಳ ಖಾತೆ ಸಂಖ್ಯೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.ವಿದ್ಯಾರ್ಥಿವೇತನ ಮಾಹಿತಿಗಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in ನಲ್ಲಿ ಪರಿಶೀಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು-70 ಅಥವಾ ದೂರವಾಣಿ ಸಂಖ್ಯೆ : 080-26711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.