ಬಳ್ಳಾರಿ : ವಿಕಲಚೇನತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಗೆ ನಂತರದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ರಾಜ್ಯ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ https://ssp.karnataka.gov.in/ ನಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ, ನಗರಸಭೆ, ಪುರಸಭೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕು ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂ ಇವರಿಗೆ ಸಲ್ಲಿಸಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾಂiÀರ್iಕರ್ತರು (ಎಂ.ಆರ್.ಡಬ್ಲ್ಯೂ) ಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಆಯಾ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮೊ.ಸಂಖ್ಯೆ: ಬಳ್ಳಾರಿ-8880875620, ಕಂಪ್ಲಿ-7676038917, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.