ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನವೀನ ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ತಾಲೂಕು ದೂ.ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.