alex Certify ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 29 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಹಾಗೂ ಅನೈರ್ಮಲ್ಯ ವೃತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (https://ssp.karnataka.gov.in) ದಲ್ಲಿ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 4ನೇ ಮುಖ್ಯ ರಸ್ತೆ, 16ನೇ ಅಡ್ಡ ರಸ್ತೆ, ಸಂಪಂಗಿರಾಮನಗರ,ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080- 22240449, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು ದೂರವಾಣಿ ಸಂಖ್ಯೆ: 080-28461351, ಮೊಬೈಲ್ ಸಂಖ್ಯೆ -9480843051.,ಬೆಂಗಳೂರು ದಕ್ಷಿಣ ತಾಲ್ಲೂಕು ದೂರವಾಣಿ ಸಂಖ್ಯೆ: 080-26711096, ಮೊಬೈಲ್ ಸಂಖ್ಯೆ 9480843050., ಬೆಂಗಳೂರು ಪೂರ್ವ ತಾಲ್ಲೂಕು ದೂರವಾಣಿ ಸಂಖ್ಯೆ: 080-29535045, ಮೊಬೈಲ್ ಸಂಖ್ಯೆ: 9480843049. ಹಾಗೂ ಆನೇಕಲ್ ತಾಲ್ಲೂಕು ದೂರವಾಣಿ ಸಂಖ್ಯೆ: 080-27859557, ಮೊಬೈಲ್ ಸಂಖ್ಯೆ: 9480843052 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...