ಬಳ್ಳಾರಿ : ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2023-24 ರ ಶೈಕ್ಷಣಿಕ ವರ್ಷಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ವೈದ್ಯಕೀಯ ಮಂಡಳಿ, ಯುಜಿಸಿಯಂತಹ ಆಯಾ ಸರ್ಕಾರಿ ನಿಯಂತ್ರಣ ಸಂಸ್ಥೆಗಳಲ್ಲಿ ಮೊದಲ ವೃತ್ತಿಪರ ಪದವಿ ಕೋರ್ಸಗಳಾದ ಬಿಇ, ಬಿಟೆಕ್, ಬಿಡಿಎಸ್, ಎಂಬಿಬಿಎಸ್, ಬಿಇಡಿ, ಬಿಬಿಎ, ಬಿಸಿಎ, ಬಿ ಫಾರ್ಮ ಕೋರ್ಸ್ಗಳಲ್ಲಿ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಕೆಎಸ್ಬಿ ವೆಬ್ಸೈಟ್ (www.ksb.gov.in.) ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್.ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.