ಬೆಂಗಳೂರು ನಗರ ಜಿಲ್ಲೆ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 14 ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಯುಳ್ಳ ಭೂಸೇನೆಯ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಪತ್ರಿಕೆಯಲ್ಲಿ ಪ್ರಕಟಣೆವಾದ ದಿನದಿಂದ 40 ದಿನದೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು -560025 ಇಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25589459 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.