ಶಿವಮೊಗ್ಗ : 2023-24 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿ ಪ್ರಾಥಮಿಕ ಹಂತದಲ್ಲಿ 2 ರಿಂದ 5 ನೇ ತರಗತಿ ಹಾಗೂ ಪ್ರೌಢಶಾಲಾ ಹಂತದಲ್ಲಿ 7 ರಿಂದ 12 ನೇ ತರಗತಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂ.19 ರಂದು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು.
ಅರ್ಜಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಸಂಖ್ಯೆಯನ್ನು ನಮೂದಿಸಲು ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.