ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಹಾಯಕರು-01 ಹಾಗೂ ಆನೇಕಲ್ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-01. ಬೆಂಗಳೂರು ಪೂರ್ವ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-01, ಬೆಂಗಳೂರು ರಾಜ್ಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-01 ಒಟ್ಟು-04 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಜಿಲ್ಲಾ ಕಾರ್ಯಕ್ರಮ ಸಹಾಯಕರು: ಅಭ್ಯರ್ಥಿಯು ನಿರ್ವಹಣೆ/ ಸಾಮಾಜಿಕ ವಿಜ್ಞಾನ/ ಪೋಷಣೆಯಲ್ಲಿ ಪದವಿ/ ಸ್ನಾತಕೋತ್ತರ ಡಿಪ್ಲೊಮಾ ಹೊಂದಿರಬೇಕು. ತಾಲ್ಲೂಕು ಕಾರ್ಯಕ್ರಮ ಸಂಯೋಜನಕರುಗಳ ಹುದ್ದೆಗೆ ಅಭ್ಯರ್ಥಿಯು ಪದವಿ, ತಂತ್ರಜ್ಞಾನ ಮತ್ತು ಸಾಫ್ಟ್ ವೇರ್ ಅಪ್ಲಿಕೇಶನ್ ನಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ 21 ರಿಂದ 45 ವರ್ಷ ವಯೋಮಿತಿಯಾವರಾಗಿರಬೇಕು. ಆಸಕ್ತಿಯುಳ್ಳರ ಅಭ್ಯರ್ಥಿಗಳು ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 22 ರ ಸಂಜೆ 5.30 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-29578688 ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.