alex Certify ‘ದೀನ್ ದಯಾಳ ಸ್ಪರ್ಶ’ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದೀನ್ ದಯಾಳ ಸ್ಪರ್ಶ’ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸವನ್ನು ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು.ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಾಭಿರುಚಿಯ ಅರೋಗ್ಯ ಪೂರ್ಣ ಜ್ಞಾನಧಾರಿತ ಹವ್ಯಾಸ ರೂಢಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ.

ಅರ್ಹತೆ:
2023-24ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆ ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್‌ನಲ್ಲಿ ಸದಸ್ಯರಾಗಿರಬೇಕು.ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ.6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಸೆ.03 ಕೊನೆಯ ದಿನವಾಗಿದೆ.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊ.9880979730, 9480722701 ಹಾಗೂ ದೂ.08392-266037 ಗೆ ಸಂಪಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...