ಶಿವಮೊಗ್ಗ : ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ರಚಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಸೆ. 08 ರೊಳಗಾಗಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.