ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದಲ್ಲಿ 2ನೇ ಹಂತದಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ವಿವರ
ಆಹಾರ ಮತ್ತು ಪಾನೀಯ ಸೇವಾ ವ್ಯವಸ್ಥಾಪಕ: ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರಬೇಕು. 20 ರಿಂದ 45 ವರ್ಷದೊಳಗಿನವರಾಗಿರಬೇಕು. (ನಾಲ್ಕು ತಿಂಗಳ ಅವಧಿ).
ಬಹು ವಿಧದ ಅಡುಗೆಯವರು: 8ನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 45 ವರ್ಷದೊಳಗಿನವರಾಗಿರಬೇಕು. (ಐದು ತಿಂಗಳ ಅವಧಿ).ಅರ್ಜಿಗಳನ್ನು ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಏ.03 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ಖಾತರಿಯಾಗಿದೆ.
ತರಬೇತಿ ಪಡೆಯುವ ವೇಳೆ ರೂ.2000/- ರಂತೆ ಮಾಹೆಯಾನ ಸ್ಟೆöÊಫಂಡ್ ನೀಡಲಾಗುವುದು. ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಸಮವಸ್ತç ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ತರಬೇತಿ ಸಹ ನೀಡಲಾಗುವುದು.
ಐಹೆಚ್ಎಂ ಬೆಂಗಳೂರು ಮತ್ತು ಎಫ್ಸಿಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು ಈ ಸಂಸ್ಥೆಗಳಿAದ ತರಬೇತಿ ನೀಡಿ ಪ್ರಮಾಣ ಪತ್ರಗಳನ್ನು ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿ ಅಥವಾ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.