ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ರೀತಿಯ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಬ್ಯಾಕ್ಯಾರ್ಡ್ ಮಿನಿ ಆರ್.ಎ.ಎಸ್ ಸಾಮಾನ್ಯ-02, ಮಹಿಳೆ-01 ಮತ್ತು ಪರಿಶಿಷ್ಟ ಜಾತಿ-01 ಗುರಿ ನಿಗದಿಪಡಿಸಲಾಗಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60 ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚ ಶೇ.40 ರಂತೆ ಸಹಾಯಧನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ನಗರದ ನಾಗಲಕೆರೆಯ ಹತ್ತಿರದ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಹಾಗೂ ಬಳ್ಳಾರಿ, ಸಿರುಗುಪ್ಪ, ಕುರುಗೋಡು, ಕಂಪ್ಲಿ, ಸಂಡೂರು ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕ ಶರಣಬಸವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.