ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ವತಿಯಿಂದ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕಾಗಿ ಅರ್ಜಿ ಸಲ್ಲಿಸಲು ನವೆಂಬರ್, 04 ಕೊನೆಯ ದಿನವಾಗಿದೆ. ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ ಇಂತಿದೆ. ಮೆಕ್ಯಾನಿಕ್ ಡೀಸೆಲ್ (40 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರೀಷಿಯನ್(18 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್(5 ಸ್ಥಾನ), ಫಿಟ್ಟರ್ (5 ಸ್ಥಾನ), ಪಾಸಾ(10 ಸ್ಥಾನ). ತರಬೇತಿ ಅವಧಿ ಒಂದು ವರ್ಷ ಆಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ:
ಮೆಕ್ಯಾನಿಕ್ ಡೀಸೆಲ್ ಒಟ್ಟು 29 ಸ್ಥಾನ. ತರಬೇತಿ 2 ವರ್ಷ ಆಗಿರುತ್ತದೆ. ಅರ್ಜಿಯನ್ನು ಆಯೋಗದ ಅಂತರ್ಜಾhttp://xn--www-2gk.apprenticeshippindia.org/ ಮೂಲಕ ನೋಂದಣಿ ಮಾಡುವುದು ಹಾಗೂ ನೋಂದಣಿ ಪ್ರತಿ ಸಲ್ಲಿಸುವುದು. ವಯೋಮಿತಿ 2023 ರ ಅಕ್ಟೋಬರ್, 06 ಕ್ಕೆ 18 ವರ್ಷ ತುಂಬಿರಬೇಕು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ರತಿ-2, ಬ್ಯಾಂಕ್ ಪಾಸ್ ಬುಕ್ ಪ್ರತಿ-2, ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಬಗ್ಗೆ ಸಂಬಂಧಿಸಿದ ಬ್ಯಾಂಕ್ನಿಂದ ದೃಢೀಕರಣ ಪತ್ರ. ಇ-ಮೇಲ್ ಐಡಿ, ವಿದ್ಯಾರ್ಹತೆಯ ಮೂಲದಾಖಲಾತಿ ಮತ್ತು ಜೆರಾಕ್ಸ್ ಪ್ರತಿ ಹಾಗೂ ಜಾತಿ ಪ್ರಮಾಣದ ಮೂಲ ಪ್ರತಿ ಮತ್ತು ಜೆರಾಕ್ಸ್ ಪ್ರತಿಯನ್ನು ತರಬೇಕು.
ಹೆಚ್ಚಿನ ಮಾಹಿತಿಗೆ ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕರು ಅಥವಾ ಪುತ್ತೂರಿನ ವಿಭಾಗೀಯ ನಿಯಂತ್ರಣಾಧಿಕಾರಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.